ಬೆಂಗಳೂರು: ರಾಜ್ಯ ಸರ್ಕಾರ 545 ಪಿಎಸ್ಐ ಹುದ್ದೆಗಳ ನೇಮಕಾತಿ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದೆ.
ಪಿಎಸ್ಐ ಹುದ್ದೆಗಳ ನೇಮಕಾತಿಯನ್ನು ಸರ್ಕಾರದ ಸ್ವತಂತ್ರ ಸಂಸ್ಥೆಯಿಂದ ನಡೆಸಲು ಹೈಕೋರ್ಟ್ ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರೀಕ್ಷಾ ಪ್ರಾಧಿಕಾರಕ್ಕೆ ಈ ಜವಾಬ್ದಾರಿ ನೀಡಿದೆ.
ಕೆಇಎ ಈಗಾಗಲೇ ಸಹಾಯಕ ಪ್ರಾಧ್ಯಾಪಕರು, ಕೆಪಿಟಿಸಿಎಲ್, ನಿಗಮ -ಮಂಡಳಿಗಳ ಹುದ್ದೆಗಳು, ಸೇರಿದಂತೆ ಅನೇಕ ಇಲಾಖೆಗಳಿಗೆ ಸಂಬಂಧಿಸಿದ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಪಿಎಸ್ಐ ಪರೀಕ್ಷೆಯಲ್ಲಿ ಆಕ್ರಮ ನಡೆದ ಕಾರಣಕ್ಕೆ ಸರ್ಕಾರ ಮರು ಪರೀಕ್ಷೆಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು.
545 ಹುದ್ದೆಗಳ ನೇಮಕಾತಿಗೆ 2021ರಲ್ಲಿ ಅಧಿಸೂಚನೆ ಹೊರಡಿಸಿದ್ದು, 1.42 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ದೈಹಿಕ ಪರೀಕ್ಷೆಗೆ ಅರ್ಹರಾಗಿದ್ದ 54,104 ಅಭ್ಯರ್ಥಿಗಳಿಗೆ ಅಕ್ಟೋಬರ್ 2021 ರಲ್ಲಿ ಪರೀಕ್ಷೆ ನಡೆಸಿ 2022ರಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.
ಲಿಖಿತ ಪರೀಕ್ಷೆಯಲ್ಲಿ ಆಕ್ರಮ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲಾಗಿತ್ತು. ಸಿಐಟಿ ನೀಡಿದ ಮಧ್ಯಂತರ ವರದಿ ಅನ್ವಯ ಸರ್ಕಾರ 2021ರ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ಮರು ಪರೀಕ್ಷೆ ನಡೆಸಲು ಆದೇಶ ನೀಡಿತ್ತು.