ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37,900 ರಿಂದ 70,850 ರೂ. ವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500 ರೂ. ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ ‘ಅಭ್ಯರ್ಥಿ ಪ್ರತಿ’ಯನ್ನು ಇಟ್ಟುಕೊಂಡಿರಬೇಕು. ಅರ್ಜಿ ಶುಲ್ಕವನ್ನು ಪಾವತಿಸಲು ಮೇ 24, 2021 ಕೊನೆಯ ದಿನವಾಗಿದೆ.
ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಿ ಮೂಲಕ ಮೇ 20 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.