alex Certify 545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.

35 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆರೋಪಿತರನ್ನು ಹೊರತುಪಡಿಸಿ ಉಳಿದವರನ್ನು ಪರಿಗಣಿಸಲು ಸಾಧ್ಯವೇ ಎಂದು ಹೈಕೋರ್ಟ್ ಸರ್ಕಾರಕ್ಕೆ ಪ್ರಶ್ನಿಸಿದೆ. ಆರೋಪಿಗಳಲ್ಲದವರ ಸಾಮರ್ಥ್ಯ ಅಳೆದು ಆಯ್ಕೆ ಸಾಧ್ಯವೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗಿಯ ಪೀಠ ಪ್ರಶ್ನೆ ಮಾಡಿದೆ. 10 ದಿನಗಳಲ್ಲಿ ಸರ್ಕಾರದ ನಿಲುವು ತಿಳಿಸುವಂತೆ ಸೂಚನೆ ನೀಡಲಾಗಿದ್ದು, ವಿಚಾರಣೆಯನ್ನು ಜೂನ್ 27ಕ್ಕೆ ಹೈಕೋರ್ಟ್ ಮಂದೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...