ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಡಿಜಿಪಿ ಅವರ ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಇದರ ಬಗ್ಗೆ ಸಿದ್ದರಾಮಯ್ಯನವರ ಬಳಿ ಸಾಕಷ್ಟು ಮಾಹಿತಿ ಇದೆ ಎಂದು ಹೇಳಿದ್ದಾರೆ.
ಬಂಧಿತರನ್ನು ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿಲ್ಲ. ಸೆಕ್ಷನ್ 164ರ ಅಡಿ ನ್ಯಾಯಾಲಯಕ್ಕೆ ಅಭಿಪ್ರಾಯ ಕೊಡಿಸಬೇಕು. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಅವಕಾಶವಿದೆ ಎಂದು ಹೇಳಿದ ಅವರು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.