
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಕಲಬುರ್ಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಅಮಾನತು ಮಾಡಲಾಗಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದ ಕಲ್ಬುರ್ಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಆರ್.ಆರ್. ಹೊಸಮನಿ ಮತ್ತು ಮೇಲ್ವಿಚಾರಕರಾಗಿ ದಿಲೀಪ್ ಸಾಗರ್ ಅವರು ಕಾರ್ಯನಿರ್ವಹಿಸಿದ್ದರು. ಈ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮದಲ್ಲಿ ಇವರಿಬ್ಬರು ಭಾಗಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.