ಬೆಂಗಳೂರು: ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿದ್ದ 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಡೆಸಬೇಕೋ ಅಥವಾ ಆರೋಪಿಗಳನ್ನು ಬಿಟ್ಟು ಉಳಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆಸಬೇಕೋ ಎಂದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಪಿಎಸ್ಐ ನೇಮಕಾತಿ ಪ್ರಕರಣದ ಬಗ್ಗೆ ಇದೀಗ ಹೈಕೋರ್ಟ್ ತನ್ನದೇ ಅಭಿಪ್ರಾಯ ವ್ಯಕ್ತಪಡಿಸಿದೆ.
ಪಿಎಸ್ಐ ನೇಮಕಾತಿ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೋಲ್ನೋಟಕ್ಕೆ ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವುದೇ ಸೂಕ್ತ ಎಂದು ತಿಳಿಸಿದೆ. ಇದೇ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದು, ಮುಂದಿನ ವಿಚಾರಣೆಯನ್ನು ಆ.7ಕ್ಕೆ ಮುಂದೂಡಿದೆ.