
ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಅವರು ಮಾಳೂರು ಠಾಣೆಯ ಪಿಎಸ್ಐ ಸಿದ್ದಪ್ಪ ಕಾನ್ಸ್ ಟೆಬಲ್ ಪ್ರದೀಪ್ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಮಾಳೂರು ಪೊಲೀಸ್ ವಸತಿಗೃಹ ಸಮೀಪ ಸಾಗುವಾನಿ ಮರದ ತುಂಡುಗಳನ್ನು ಶೇಖರಿಸಿಡಲಾಗಿತ್ತು. ಪ್ರಕರಣದ ತನಿಖೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.