
ತುಮಕೂರು: ದಲಿತರ ಮೇಲಿನ ದೌರ್ಜನ್ಯ, ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐಗಳು ಸೇರಿ 5 ಪೊಲೀಸರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತು ಮಾಡಿದ್ದಾರೆ.
ತುರುವೇಕೆರೆ ಪಿಎಸ್ಐ ಗಳಾದ ಗಣೇಶ್, ರಾಮಚಂದ್ರಯ್ಯ, ಹೆಡ್ ಕಾನ್ಸ್ಟೇಬಲ್ ರಘುನಂದನ್ ಅವರನ್ನು ಮಹಿಳೆಯೊಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಎಫ್ಐಆರ್ ದಾಖಲಿಸದ ಕಾರಣಕ್ಕೆ ಅಮಾನತು ಮಾಡಲಾಗಿದೆ.
ಮಧುಗಿರಿ ತಾಲೂಕು ಬಡವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ನಾಗರಾಜ್ ಮತ್ತು ಎಎಸ್ಐ ಸುರೇಶ್ ಅವರನ್ನು ದಲಿತರ ಮೇಲೆ ಹಲ್ಲೆ ಸಂಬಂಧ ದೂರು ನೀಡಿದ್ದರೂ ಎಫ್ಐಆರ್ ದಾಖಲಿಸದ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.