ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ 100 ಕ್ಕೂ ಅಧಿಕ ತಹಶೀಲ್ದಾರ್ ಗಳು, ಡಿ.ವೈ.ಎಸ್.ಪಿ.ಗಳ ವರ್ಗಾವಣೆ ಮಾಡಲಾಗಿತ್ತು. ಇದೀಗ 211 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಗೃಹ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಪೊಲೀಸ್ ಇನ್ಸ್ ಪೆಕ್ಟರ್ ಗಳ ಬಗ್ಗೆ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ವರ್ಗಾವಣೆ ವಿಚಾರವಾಗಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಇಚ್ಛೆಯತೆ ಅನುಸಾರ ವರ್ಗಾವಣೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಸಿಎಂ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಮೊದಲಿಗೆ ತಹಶೀಲ್ದಾರ್ ಗಳು, ನಂತರ ಡಿ.ವೈ.ಎಸ್.ಪಿ.ಗಳು, ಈಗ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.