
ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಅಭ್ಯರ್ಥಿಗಳು ರಕ್ತದಲ್ಲಿ ಪತ್ರಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಎಸ್ ಐ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ವಿಳಂಬ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಆಯ್ಕೆ ಪಟ್ಟಿ ಪ್ರಕಟಿಸುವಂತೆ ಒತ್ತಾಯಿಸಿದ್ದಾರೆ.
545 ಪಿಎಸ್ಐ ಹುದ್ದೆಗೆ ಜನವರಿಯಲ್ಲಿ ಮರುಪರೀಕ್ಷೆ ನಡೆದಿತ್ತು. ಮಾರ್ಚ್ ನಲ್ಲಿ ಆಯ್ಕೆ ಪಟ್ಟಿ ಪ್ರಕಟವಾಗಬೇಕಿತ್ತು. ಆದರೆ ಈವರೆಗೂ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿಲ್ಲ. ಇದರಿಂದ ನೊಂದ ಅಭ್ಯರ್ಥಿಗಳು ಗೃಹ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.