
ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಮಣಿಕಂಠ ಅಮಾನತು ಆದವರು. ಬಳ್ಳಾರಿ ವಲಯ ಐಜಿಪಿ ಲೋಕೇಶ್ ಕುಮಾರ್, ಮಣಿಕಂಠ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಅಕ್ರಮ ಮರಳು ಸಾಗಾಟ ಆರೋದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎಂಬುವವರ ಮೇಲೆ ಪಿಎಸ್ಐ ಮಣಿಕಂಠ ಮನಬಂದಂತೆ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು. ಈ ಬೆಳವಣಿಗೆ ಬಳಿಕ ಪಿಎಸ್ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.