alex Certify BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ಸಸ್ಪೆಂಡ್

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಮಣಿಕಂಠ ಅಮಾನತು ಆದವರು. ಬಳ್ಳಾರಿ ವಲಯ ಐಜಿಪಿ ಲೋಕೇಶ್ ಕುಮಾರ್, ಮಣಿಕಂಠ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಅಕ್ರಮ ಮರಳು ಸಾಗಾಟ ಆರೋದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎಂಬುವವರ ಮೇಲೆ ಪಿಎಸ್ಐ ಮಣಿಕಂಠ ಮನಬಂದಂತೆ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು. ಈ ಬೆಳವಣಿಗೆ ಬಳಿಕ ಪಿಎಸ್ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...