ಭಾರತೀಯ ಒಲಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಖ್ಯಾತ ಕ್ರೀಡಾಪಟು ಪಿ.ಟಿ. ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ನಡೆಸದಿದ್ದರೆ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೂಚನೆ ನೀಡಿದ್ದ ಬೆನ್ನಲ್ಲೇ ಈ ಮಹತ್ವದ ಚುನಾವಣೆ ನಡೆದಿತ್ತು.
ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾದರೆ, ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಹಾಗೂ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಸಹ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರದಂದು ಈ ಚುನಾವಣೆ ನಡೆದಿದ್ದು, ಭಾರತೀಯ ಒಲಂಪಿಕ್ ಅಸೋಸಿಯೇಷನ್ ನಿರ್ದೇಶಕರಾಗಿ ಭೂಪೇಂದ್ರ ಸಿಂಗ್ ಬಜ್ವಾ, ಅಮಿತಾಬ್ ಶರ್ಮಾ, ಹರ್ಪಾಲ್ ಸಿಂಗ್ ಹಾಗೂ ರೋಹಿತ್ ರಾಜ್ಪಾಲ್ ಆಯ್ಕೆಯಾಗಿದ್ದಾರೆ.