alex Certify BIG NEWS: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ. ಉಷಾ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ. ಉಷಾ ಆಯ್ಕೆ

ಭಾರತೀಯ ಒಲಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಖ್ಯಾತ ಕ್ರೀಡಾಪಟು ಪಿ.ಟಿ. ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ನಡೆಸದಿದ್ದರೆ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೂಚನೆ ನೀಡಿದ್ದ ಬೆನ್ನಲ್ಲೇ ಈ ಮಹತ್ವದ ಚುನಾವಣೆ ನಡೆದಿತ್ತು.

ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾದರೆ, ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಹಾಗೂ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಸಹ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರದಂದು ಈ ಚುನಾವಣೆ ನಡೆದಿದ್ದು, ಭಾರತೀಯ ಒಲಂಪಿಕ್ ಅಸೋಸಿಯೇಷನ್ ನಿರ್ದೇಶಕರಾಗಿ ಭೂಪೇಂದ್ರ ಸಿಂಗ್ ಬಜ್ವಾ, ಅಮಿತಾಬ್ ಶರ್ಮಾ, ಹರ್ಪಾಲ್ ಸಿಂಗ್ ಹಾಗೂ ರೋಹಿತ್ ರಾಜ್ಪಾಲ್ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...