alex Certify PU ಕಾಲೇಜು ಆರಂಭಿಸಲು ಬಯಸಿರುವ ಶಿಕ್ಷಣ ಸಂಸ್ಥೆಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PU ಕಾಲೇಜು ಆರಂಭಿಸಲು ಬಯಸಿರುವ ಶಿಕ್ಷಣ ಸಂಸ್ಥೆಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಬಯಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 – 24 ನೇ ಸಾಲಿನಲ್ಲಿ ಹೊಸದಾಗಿ ಕಾಲೇಜು ಆರಂಭಿಸಲು ಅರ್ಹ ಶಿಕ್ಷಣ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಡಿಸೆಂಬರ್ 6 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮಾಹಿತಿಗಾಗಿ https://pue.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

2021 – 22 ಮತ್ತು 2022 – 23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯು ಕಾಲೇಜು ಆರಂಭಿಸಲು ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...