
ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರ ಆದೇಶಿಸಿದೆ,
ಪರಿಷ್ಕೃತ ನಿಯಮಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಿ ಮುಂದಿನ ಮೂರು ತಿಂಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯ ನಿರ್ವಹಣಾ ನಿರ್ದೇಶಕ ಹೆಚ್. ಪ್ರಸನ್ನ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಪತ್ರ ಬರೆದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ(ಪದವಿಪೂರ್ವ) ವೃಂದ ಮತ್ತು ನೇಮಕಾತಿಗೆ ಸಂಬಂಧಿಸಿದ ನಿಯಮಗಳ ಅನುಸಾರ ಶೇಕಡ 25 ರಷ್ಟು ಪ್ರಾಂಶುಪಾಲ ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಪೈಕಿ ಆರ್ಥಿಕ ಇಲಾಖೆ ಸಹಮತಿ ನೀಡಿರುವ ಹುದ್ದೆಗಳ ಭರ್ತಿಗೆ ಆಯ್ಕೆ ಪ್ರಕ್ರಿಯೆ ನಡೆಸಯವಂತೆ ಸೂಚನೆ ನೀಡಿದ್ದಾರೆ.