alex Certify ಜ. 1 ರಿಂದ ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’: ಕೇಂದ್ರದಿಂದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 1 ರಿಂದ ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’: ಕೇಂದ್ರದಿಂದ ಸೂಚನೆ

ಬೆಂಗಳೂರು: ಜನವರಿ 1 ರಿಂದ ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಹಮ್ಮಿಕೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸೂಚನೆ ನೀಡಲಾಗಿದೆ.

ಜನವರಿ 1 ರಿಂದ ಫೆಬ್ರವರಿ 7 ರವರೆಗೆ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರವನ್ನು ಸಂಗೀತದೊಂದಿಗೆ ಆಯೋಜಿಸಬೇಕು ಎಂದು ಹೇಳಲಾಗಿದೆ. 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪತ್ರ ಬರೆದು ಸೂಚಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಕುರಿತಾಗಿ ಸೂಚನೆ ನೀಡಿದ್ದು, ರಾಜ್ಯದ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸುವಂತೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯವೃದ್ಧಿಗೆ, ಮನೋಬಲ ಹೆಚ್ಚಳಕ್ಕೆ ಸೂರ್ಯನಮಸ್ಕಾರ ಸಹಕಾರಿಯಾಗುತ್ತದೆ. ಸೂರ್ಯ ನಮಸ್ಕಾರ ಮಾಡಿದವರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...