ಬೆಂಗಳೂರು: ಪಿಯು ಉಪನ್ಯಾಸಕರಿಗೆ ಗಳಿಕೆ ರಜೆ ಮಂಜೂರು ಮಾಡಲು ಸರ್ಕಾರ ಸೂಚನೆ ನೀಡಿದೆ. ರಜಾ ದಿನಗಳಲ್ಲಿ ಕೊರೋನಾ ಕಾರ್ಯಗಳಿಗೆ ನಿಯೋಜಿಸಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಗಳಿಕೆ ರಜೆ ಮಂಜೂರು ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ರಜೆ ಅವಧಿಯಲ್ಲಿ ಕೊರೋನಾ ಕಾರ್ಯಗಳಿಗೆ ಬಳಸಿಕೊಂಡು ಉಪನ್ಯಾಸಕರುಗಳಿಗೆ ಗಳಿಕೆ ರಜೆ ನೀಡಲು ಕಾನೂನಾತ್ಮಕವಾಗಿ ಅವಕಾಶಗಳಿವೆ. ಇದರನ್ವಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.