alex Certify ಉಪನ್ಯಾಸಕರಿಗೆ ಬಿಗ್ ಶಾಕ್: ಕಡ್ಡಾಯ ವರ್ಗಾವಣೆ ಕ್ಯಾನ್ಸಲ್, ಮರು ವರ್ಗಾವಣೆಗೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪನ್ಯಾಸಕರಿಗೆ ಬಿಗ್ ಶಾಕ್: ಕಡ್ಡಾಯ ವರ್ಗಾವಣೆ ಕ್ಯಾನ್ಸಲ್, ಮರು ವರ್ಗಾವಣೆಗೆ ನಿರ್ಧಾರ

ಬೆಂಗಳೂರು: ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕೆಲವು ಲೋಪ ದೋಷಗಳು ಉಂಟಾದ ಹಿನ್ನೆಲೆಯಲ್ಲಿ ಜುಲೈ 7 ರಂದು ನಡೆಸಿದ್ದ ಕಡ್ಡಾಯ ವರ್ಗಾವಣೆಯನ್ನು ರದ್ದುಪಡಿಸಿ ಮರು ವರ್ಗಾವಣೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾ ಉಪನಿರ್ದೇಶಕರು ತಮ್ಮ ಅಧೀನದಲ್ಲಿರುವ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಜೂರಾದ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಜುಲೈ 21 ರೊಳಗೆ ಸಲ್ಲಿಸುವಂತೆ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

ಪದವಿ ಪೂರ್ವ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸುವಂತೆ ಉಪನ್ಯಾಸಕರ ಸಂಘದಿಂದ ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...