
ಶಿವಮೊಗ್ಗ: ಪರೀಕ್ಷೆಗೆಂದು ಕಾಲೇಜಿಗೆ ಬಂದ ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.
18 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ ಆತ್ಮಹತ್ಯೆಗೆ ಶರಣಾದವಳು. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿಯಾಗಿದ್ದ ಮೇಘಶ್ರೀ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಹಾಸ್ಟೇಲ್ ನಲ್ಲಿದ್ದು ಓದುತ್ತಿದ್ದಳು.
ಇಂದು ಬಯಾಲಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೇಘಶ್ರೀ, ವಾಶ್ ರೂಂ ಗೆ ಹೋಗುವುದಾಗಿ ಹೇಳಿ ಹೋದವಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.