ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಕಲ್ಪಿಸಿದ ರಾಜ್ಯಗಳಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.
ಇತ್ತೀಚಿನ ಅಂಕಿ ಅಂಶಗಳ ಪ್ರಕಾರ 5059 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ರಾಜ್ಯದಲ್ಲಿವೆ. ಮಹಾರಾಷ್ಟ್ರ 3079, ದೆಹಲಿ 1886, ಕೇರಳ 958, ತಮಿಳುನಾಡು 643, ಉತ್ತರ ಪ್ರದೇಶ 583, ರಾಜಸ್ಥಾನ 500 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿವೆ.