alex Certify BIG NEWS : ಫೆ.12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಫೆ.12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ

ಬಳ್ಳಾರಿ : ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಆರ್.ವಸಂತ್ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಸಂಗಮೇಶ್ ನೇತೃತ್ವದಲ್ಲಿ ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.

*ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:ಫೆ.12 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣ, ಫೆ.15 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ಸಿರುಗುಪ್ಪ ಸಿಡಿಪಿಓ ಕಚೇರಿ ಸಭಾಂಗಣ ಮತ್ತು ಫೆ.19 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ದೂರುಗಳಿದ್ದಲ್ಲಿ ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...