ದಾವಣಗೆರೆ : ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚನೆ ನೀಡಿದರು.
ಅವರು (16) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ. ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಹಾಗೂ ಕೃಷಿ ಅಂಕಿ ಅಂಶಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿ ಮಾಡುವ ಸಮಯದಲ್ಲಿ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು ತಪ್ಪಾಗಿ ಆಯ್ಕೆ ಮಾಡುತ್ತಿರುವುದು. ಮತ್ತು ಬೇರೆಯವರ ಆಧಾರ್ ಜೋಡಣೆ ಮಾಡಿ ಮರಣ ಪ್ರಮಾಣ ವಿತರಿಸುತ್ತಿರುವುದು ಕಂಡು ಬಂದಿದ್ದು, ಈ ರೀತಿಯ ತಪ್ಪುಗಳು ಇನ್ನೂ ಮುಂದೆ ಆಗದಂತೆ ಎಚ್ಚರವಹಿಸಿ ಕೆಲಸ ನಿರ್ವವಹಿಸಬೇಕು ಎಂದು ಸೂಚನೆ ನೀಡಿದರು.