alex Certify ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನ ಕುರಿತು ಇಲ್ಲಿದೆ ಮಾಹಿತಿ

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿಯವರ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ಗಳನ್ನು ನಿಮ್ಮ ಹತ್ತಿರದ ಗ್ರಾಮಒನ್ ನಿಂದ ರೇಷನ್ ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ.

ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿ.ಪಿ.ಎಲ್. ಕಾರ್ಡ್ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕಾರ್ಡ್ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ.

ಈ ಕಾರ್ಡ್ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್ನ್ನು 14 ಸಂಖ್ಯೆಯ ಆಭಾಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಮಾತ್ರ ರೆಫರಲ್ ಆಧಾರದ ಮೇಲೆ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ 104 ಅಥವಾ 14555 ಕ್ಕೆ ಕರೆಮಾಡಿ. “ನಿಮ್ಮ ಆರೋಗ್ಯ ನಮ್ಮ ಬದ್ಧತೆ” ಟೋಲ್ ಫ್ರೀ ಸಂಖ್ಯೆ: 18004258330 ಸಂಪರ್ಕಿಸಬಹುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...