alex Certify ಸಾರ್ವಜನಿಕರೇ ಗಮನಿಸಿ: ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಜೂ.14 ಕೊನೆಯ ದಿನಾಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ: ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಜೂ.14 ಕೊನೆಯ ದಿನಾಂಕ

 

ಬೆಂಗಳೂರು : ಸಾರ್ವಜನಿಕರಿಗೆ ಮುಖ್ಯ ಮಾಹಿತಿ.. ಉಚಿತವಾಗಿ ಆಧಾರ್ ಕಾರ್ಡ್ (adhar card) ಅಪ್ ಡೇಟ್ ಮಾಡಲು ಜೂನ್ 14 , 2023 ರವರೆಗೆ ಅವಕಾಶ ನೀಡಲಾಗಿದೆ.

ಯುಐಡಿಎಐ ಈ ಹಿಂದೆ ಟ್ವೀಟ್ ಮಾಡಿ.. ನೀವು ಈಗ ಮಾರ್ಚ್ 15 ರಿಂದ ಜೂನ್ 14, 2023 ರವರೆಗೆ https://myaadhaar.uidai.gov.in ನಲ್ಲಿ  ‘ಉಚಿತವಾಗಿ’ ಹೆಸರು ಮತ್ತು ವಿಳಾಸ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿತ್ತು. ಆಧಾರ್ ನಲ್ಲಿ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಸದ್ಯ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ.myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ.

ಮುಂದಿನ 8 ದಿನಗಳಲ್ಲಿ, ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು, ಏಕೆಂದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನಾಗರಿಕರಿಗೆ ತಮ್ಮ ಆಧಾರ್ ನಲ್ಲಿ ದಾಖಲೆಗಳನ್ನು ನವೀಕರಿಸಲು ಶುಲ್ಕ ವಿಧಿಸುವುದಿಲ್ಲ.

https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸವನ್ನು ನವೀಕರಿಸಲು ಕ್ಲಿಕ್ ಮಾಡಿ.ನಂತರ ನಿಮ್ಮ ರಿಜಿಸ್ಟರ್ ಮೊಬೈಲ್ ಸಂಖ್ಯೆಗೆ OTP ಬರುತ್ತದೆ, ಅದನ್ನು ಎಂಟ್ರಿ ಮಾಡಿದ ಬಳಿಕ  ಡಾಕ್ಯುಮೆಂಟ್ ಅಪ್ಡೇಟ್ ಆಯ್ಕೆಯನ್ನು ಆಯ್ಕೆ ಮಾಡಿ ಮತ್ತು ಅದರ ನಂತರ ಸ್ಕ್ರೀನ್ನಲ್ಲಿ ವಿಳಾಸ ಕಾಣಿಸಿಕೊಳ್ಳುತ್ತದೆ.ಇದರ ನಂತರ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ವಿವರಗಳನ್ನು ಪರಿಶೀಲಿಸಿ. ಇದು ಸರಿಯಾಗಿದ್ದರೆ, ನೀವು ಮುಂದಿನ ಲಿಂಕ್ ಅನ್ನು ಕ್ಲಿಕ್ ಮಾಡಿ.ನಂತರ, ನೀವು ವಿಳಾಸ ಹಾಗೂ ನಿಮ್ಮ ಹೆಸರು, ದಾಖಲೆಯನ್ನು ಸಲ್ಲಿಸಬೇಕು. ಎಲ್ಲಾ ಮಾಹಿತಿಯನ್ನು ನೀಡಿದ ನಂತರ, ಸಲ್ಲಿಸು(Submit) ಬಟನ್ ಮೇಲೆ ಕ್ಲಿಕ್ ಮಾಡಿದರೆ ಆಯ್ತು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್  ಪ್ರಕ್ರಿಯೆ ಯಶಸ್ವಿಯಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...