ಬೆಂಗಳೂರು : ಅರಣ್ಯ ಇಲಾಖೆಗೆ ದೂರು ನೀಡಲು ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ‘ವನ್ಯಜೀವಿಗಳ ಕಾಯ್ದೆ 72ನೇ ವಿಧಿ ಅನ್ವಯ ಯಾವುದೇ ವನ್ಯಜೀವಿಗಳ ಉಗುರು, ಚರ್ಮ ಸೇರಿದಂತೆ ಇತರ ವಸ್ತುಗಳನ್ನು ಯಾರೂ ಬಳಸುವಂತಿಲ್ಲ. ಜನರಿಗೆ ಈ ಬಗ್ಗೆ ಅರಿವಿಲ್ಲ ಎಂದರು.
ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ಅರಣ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ದೂರುಗಳು ಇದ್ದರೆ ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಟ ದರ್ಶನ್, ಜಗ್ಗೇಶ್ ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಎಲ್ಲರಿಗೂ ಕಾನೂನು ಒಂದೇ, ವನ್ಯ ಜೀವಿಗಳ ಚರ್ಮ ಅಥವಾ ಬೇಟೆ ಸಂಬಂಧ ಏನೇ ಕಂಡು ಬಂದರೂ ಸಾರ್ವಜನಿಕರು ಅರಣ್ಯ ಇಲಾಖೆಗೆ ವಿಷಯ ತಿಳಿಸಿ ಎಂದು ಮನವಿ ಮಾಡಿದರು.
,