BIG NEWS: ರಾಜ್ಯದಲ್ಲಿ 500 ಪಬ್ಲಿಕ್ ಶಾಲೆ ಸ್ಥಾಪಿಸಲು 2,500 ಕೋಟಿ ರೂಪಾಯಿ ನೆರವು

ಶಿವಮೊಗ್ಗ: ರಾಜ್ಯದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ 2500 ಕೋಟಿ ರೂ. ನೆರವು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೊರಬದ ವಿದ್ಯುತ್ ನಗರದಲ್ಲಿ ಭಾನುವಾರ 25 ಕೋಟಿ ವೆಚ್ಚದಲ್ಲಿ ಸೊರಬ –ಕುಮಟಾ- ಕಟಮಡಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಅರ್ಹತೆವುಳ್ಳ ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ತಡೆ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ.

ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಗೆ ತೆರಳಿ ಸಮಸ್ಯೆ ನಿವಾರಿಸಲಾಗುವುದು. ಪ್ರತಿ ಗ್ರಾಮಗಳಿಗೆ 92 ಯೋಜನೆಗಳಡಿ 250 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ರಾಜ್ಯದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ 2500 ಕೋಟಿ ರೂ ನೆರವು ನೀಡಿದ್ದು, ಇದನ್ನು ಬಳಸಿಕೊಂಡು ಎಲ್ಲಾ ಸೌಕರ್ಯಗಳು ಇರುವ ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read