ಬೆಂಗಳೂರು : ರಾಜ್ಯದ ಹಲವಡೆ ಲೋಡ್ ಶೇಡ್ಡಿಂಗ್ ಆಗುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ವಿದ್ಯುತ್ ಕುರಿತು ಸಮಸ್ಯೆಗಳನ್ನು ಪರಿಹರಿಸಲು ಬೆಸ್ಕಾಂ ಮುಂದಾಗಿದೆ.
ಹೌದು, ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು, ನಿಮ್ಮ ಜಿಲ್ಲೆಯ ಸಂಬಂಧಿತ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಸಂದೇಶಗಳು / ಚಿತ್ರಗಳು ಅಥವಾ ವೀಡಿಯೊಗಳನ್ನು ಕಳುಹಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಕಡಿತದಿಂದ ರೈತರು, ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ತೊಂದರೆ ಆಗುತ್ತಿದೆ. ಆದ್ದರಿಂದ ಬೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಸೇರಿದಂತೆ ಎಲ್ಲ ಸಂಬಂಧಿತ ಸಂಸ್ಥೆಗಳು ಸೂಕ್ತ ವಿದ್ಯುತ್ ಸರಬರಾಜು ಮಾಡಬೇಕು ಎಂದು ಗ್ರಾಹಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ.
ಇಲ್ಲಿದೆ ಸಹಾಯವಾಣಿ ಸಂಖ್ಯೆಗಳು
ಬೆಂಗಳೂರು ನಗರ- 82778 84011/82778 84012/82778 84013/ 82778 84014.
ಕೋಲಾರ-82778 84015
ಚಿಕ್ಕಬಳ್ಳಾಪುರ-82778 84016
ಬೆಂಗಳೂರು ಗ್ರಾಮಾಂತರ-82778 84017
ರಾಮನಗರ-82778 84018
ತುಮಕೂರು-82778 84019
ಚಿತ್ರದುರ್ಗ- 82778 84020
ದಾವಣಗೆರೆ- 82778 84021