ಬೆಂಗಳೂರು : ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಎಂಜೆಜೆಬಿವೈ ಹಾಗೂ ಪಿಎಂಎಸ್‍ಬಿವೈ ವಿಮಾ ಯೋಜನೆಗಳಡಿ ನೋಂದಾಯಿಸಿಕೊಳ್ಳಲು ಅಕ್ಟೋಬರ್‍ನಿಂದ ಡಿಸೆಂಬರ್ 31 ರವರೆಗೆ ನೋಂದಣಿ ಮೇಳ ನಡೆಯುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು.
ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 18 ರಿಂದ 70 ವಯಸ್ಸಿನ ವರೆಗಿನ ನಾಗರಿಕರು ರೂ.20 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿ18 ರಿಂದ 50 ವಯಸ್ಸಿನ ವರೆಗಿನ ನಾಗರಿಕರು ರೂ.436 ಗಳ ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ, ಪ್ರತಿ ಯೋಜನೆಯಡಿ ರೂ.2 ಲಕ್ಷದವರೆಗೆ ವಿಮೆ ಸೌಲಭ್ಯ ದೊರಕುತ್ತದೆ.
ಈ ಅಭಿಯಾನದಡಿ ಗ್ರಾಮ ಪಂಚಾಯಿತಿಯ ಪ್ರತಿಯೊಬ್ಬ ಅರ್ಹ ನಾಗರಿಕರು ಎರಡು ಯೋಜನೆಗಳಲ್ಲಿ ನೋಂದಣಿ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್ ಶಾಖೆ ಅಧಿಕಾರಿಗಳಿಗೆ ತಿಂಗಳಿಗೊಮ್ಮೆ ಪಿಎಂಜೆಜೆಬಿವೈ, ಪಿಎಂಎಸ್‍ಬಿವೈ ಹಾಗೂ ಕೆಸಿಸಿ ಬೆಳೆಸಾಲ ಮೇಳ ಹಮ್ಮಿಕೊಳ್ಳಲು ಪ್ರತಿ ಪಂಚಾಯಿತಿಗೆ ಲೀಡ್ ಬ್ಯಾಂಕ್‍ನಿಂದ ಸೂಚನೆ ನೀಡಲಾಗಿದೆ.
ಗ್ರಾಮ ಪಂಚಾಯತಿ ಮಟ್ಟದ ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಕೃಷಿ ಸಖಿ, ಪಶು ಸಖಿ ಹಾಗು ಎಂಬಿಕೆ, ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳ ಸಹಯೋಗದೊಂದಿಗೆ ಬ್ಯಾಂಕಿನ ಅಧಿಕಾರಿಗಳ ಜೊತೆಗೂಡಿ ವಿಮೆ ಸೌಲಭ್ಯಕ್ಕೆ ನೋಂದಾಯಿಸಿಕೊಳ್ಳಲು ಜಾಗೃತಿ ನೀಡಬೇಕು ಹಾಗೂ ಪ್ರತಿಯೊಬ್ಬರೂ ಮೇಳಗಳಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬೇಕು.