
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಜುಲೈ 15 ರಿಂದ ಆನ್ಲೈನ್ ತರಗತಿಗಳು ಶುರುವಾಗಲಿವೆ. ಮೊದಲ ಹಂತದಲ್ಲಿ ಆನ್ಲೈನ್ ತರಗತಿಗಳನ್ನು ಆರಂಭಿಸಲಿದ್ದು, ನಮತರ ಭೌತಿಕ ತರಗತಿ ಆರಂಭದ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಪಿಯು ಬೋರ್ಡ್ ನಿಂದ ಪ್ರಸ್ತಾವನೆ ಸಲ್ಲಿಸಿದ್ದು, ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.