alex Certify ದ್ವಿತೀಯ ಪಿಯುಸಿ -2 ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ -2 ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಏಪ್ರಿಲ್ 29 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ 301 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿದ ಎಲ್ಲಾ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://kseab.karnataka.gov.in ವೆಬ್ಸೈಟ್ ನಲ್ಲಿ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

11 ಅಂಕಿಗಳ ನೋಂದಣಿ ಸಂಖ್ಯೆ ಹೊಂದಿಲ್ಲದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ದ್ವಿತೀಯ ಪಿಯುಸಿ ಪರೀಕ್ಷೆ- 2ಗೆ ಈಗಾಗಲೇ ಪ್ರಕಟಿಸಲಾದ ವೇಳಾಪಟ್ಟಿಯಲ್ಲಿ ಮೇ 4ರಂದು ನಿಗದಿಯಾಗಿದ್ದ ಗೃಹ ವಿಜ್ಞಾನ ವಿಷಯದ ಪರೀಕ್ಷೆ ಮುಂಗಡಲಾಗಿದೆ. ಮೇ 9 ರಂದು ಬೆಳಗ್ಗೆ 10.15ರಿಂದ  1:30ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...