
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 3 ರಿಂದ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಮಾದರಿ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾರ್ಚ್ 27ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು. jdexam.kseab@gmail.com ಗೆ ಆನ್ ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಬೇಕಿದೆ.