ಬೆಂಗಳೂರು: ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ರಿಪೀಟರ್ಸ್ ಪಾಸ್ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.
ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದೆ. ಆದರೆ, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆದಿದ್ದು, ಈ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ರಚಿಸಿದ್ದ ತಜ್ಞರ ಸಮಿತಿ, ಫ್ರೆಶರ್ಸ್ ವಿದ್ಯಾರ್ಥಿಗಳ ರೀತಿಯಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಬೇಕೆಂದು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.
ತಜ್ಞರ ವರದಿಯನ್ನು ಸರ್ಕಾರ ಹೈಕೋರ್ಟ್ ಮುಂದೆ ಇಡಲಿದ್ದು, ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ ಸಮ್ಮತಿಸಿದರೆ ಸುಮಾರು ಒಂದು ಲಕ್ಷದಷ್ಟು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ಪಾಸಾಗುವ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.