alex Certify ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷೆಯನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆ ಮಾರ್ಚ್ 6ರಂದು ನಡೆಸಲು ಸೂಚನೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಎಲ್ಲಾ ಪಿಯುಸಿ ಕಾಲೇಜುಗಳಿಗೆ ನಿಯಮ ಅನ್ವಯವಾಗಲಿದೆ. ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಬೆಳಗಾವಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...