ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ತಿಂಗಳಾಂತ್ಯಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಮೌಲ್ಯಮಾಪನ ಕಾರ್ಯ ಏಪ್ರಿಲ್ 5ರಿಂದ ನಡೆಯುತ್ತಿದೆ. ಶೇಕಡ 50ರಷ್ಟು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ.
ವಾರದಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಂತರ ಫಲಿತಾಂಶ ಪ್ರಕಟಿಸಲು ಏಳೆಂಟು ದಿನ ಬೇಕಾಗಿದ್ದು, ಎಲ್ಲಾ ಕಾರ್ಯ ಪೂರ್ಣಗೊಳಿಸಿ ತಿಂಗಳಾಂತ್ಯಕ್ಕೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ಹೇಳಿದ್ದಾರೆ.