ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ.
ಮಾರ್ಚ್ 9 ರಿಂದ 29 ರವರೆಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.
ಪ್ರವೇಶ ಪತ್ರಗಳನ್ನು ತೋರಿಸಿ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ವಾಸ ಸ್ಥಳಗಳಿಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು. ಕೆಎಸ್ಆರ್ಟಿಸಿ ಸಾಮಾನ್ಯ, ವೇಗದೂತ, ನಗರ, ಹೊರ ವಲಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.