alex Certify ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಸುಧಾರಣೆ: ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಸುಧಾರಣೆ: ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು  ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6 ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...