ಬೆಂಗಳೂರು: ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ ಅಂಕ ಹೆಚ್ಚಿಸಿಕೊಳ್ಳಲು ವರದಾನವಾಗಿದೆ. ಹೀಗಾಗಿ 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಈ ಬಾರಿ ನಡೆಸುತ್ತಿರುವ ವರ್ಷಕ್ಕೆ ಮೂರು ಪರೀಕ್ಷೆಯ ಅನುಕೂಲ ಪಡೆದುಕೊಳ್ಳಲು ವಿದ್ಯಾರ್ಥಿಗಳು ಸಿದ್ದರಾಗಿದ್ದಾರೆ.
ಇಷ್ಟು ವರ್ಷ ವಾರ್ಷಿಕ ಪರೀಕ್ಷೆ ನಡೆದ ನಂತರ ಫೇಲಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ಪೂರಕ ಪರೀಕ್ಷೆ ನಡೆಸುತ್ತಿತ್ತು. ಈ ವರ್ಷದಿಂದ ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆ ನಡೆಸುತ್ತಿರುವ ಪರಿಣಾಮ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ಎರಡನೇ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಮುಂದಾಗಿದ್ದಾರೆ.
2023ರ ಪೂರಕ ಪರೀಕ್ಷೆಗೆ 1.58 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿದೆ. 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 81.15 ರಷ್ಟು ಫಲಿತಾಂಶ ಬಂದಿದ್ದು, 5.52 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅನುತ್ತೀರ್ಣರಾದ 1.28 ಲಕ್ಷ ವಿದ್ಯಾರ್ಥಿಗಳ ಜೊತೆಗೆ ಖಾಸಗಿ ಅಭ್ಯರ್ಥಿಗಳು ಮತ್ತು ಅಂಕ ಹೆಚ್ಚಿಸಿಕೊಳ್ಳಲು ಉತ್ತಮ ಫಲಿತಾಂಶ ಬಂದಿದ್ದರೂ ಕೆಲವು ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.