alex Certify ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಮೊದಲು 9 ಗಂಟೆಯಿಂದ 12.15 ರ ವರೆಗೆ ಸಮಯ ನಿಗದಿ ಮಾಡಲಾಗಿದ್ದು, ಅದರ ಬದಲಿಗೆ ಬೆಳಗ್ಗೆ 9.30 ರಿಂದ 12.45 ರ ವರೆಗೆ ಪರೀಕ್ಷೆ ನಡೆಸಲಾಗುವುದು. ಮಳೆಯ ಕಾರಣ ಸಮಯ ಬದಲಾವಣೆ ಮಾಡಬೇಕೆಂದು ಸಾರ್ವಜನಿಕರಿಂದ ಮನವಿ ಬಂದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸಮಯ ಬದಲಾವಣೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 9 ರಿಂದ 23 ರವರೆಗೆ ಮಧ್ಯವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...