alex Certify ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ನವೆಂಬರ್ 29 ರಿಂದ ಡಿಸೆಂಬರ್ 10 ರವರೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 15 ರವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆಗಳು ನಡೆಯಲಿವೆ.

ನವೆಂಬರ್ 29 ರಂದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಫ್ರೆಂಚ್, ಅರೇಬಿಕ್ ಪರೀಕ್ಷೆ ನಡೆಯಲಿದೆ.

ನವೆಂಬರ್ 30 ರಂದು ಇಂಗ್ಲಿಷ್,

ಡಿಸೆಂಬರ್ 1 ರಂದು ಇತಿಹಾಸ, ಭೌತಶಾಸ್ತ್ರ,

ಡಿಸೆಂಬರ್ 2 ರಂದು ಅರ್ಥಶಾಸ್ತ್ರ, ರಸಾಯನಶಾಸ್ತ್ರ,

ಡಿಸೆಂಬರ್ 3 ರಂದು ಜೀವಶಾಸ್ತ್ರ, ರಾಜ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಭೂಗರ್ಭಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿವೆ.

ಡಿಸೆಂಬರ್ 6 ರಂದು ಸಮಾಜಶಾಸ್ತ್ರ, ಗಣಿತ, ಮೂಲ ಗಣಿತ,

ಡಿಸೆಂಬರ್ 7 ರಂದು ಅಕೌಂಟೆನ್ಸಿ, ಎಜುಕೇಶನ್, ಹೋಮ್ ಸೈನ್ಸ್,

ಡಿಸೆಂಬರ್ 8 ರಂದು ಬ್ಯುಸಿನೆಸ್ ಸ್ಟಡೀಸ್, ಲಾಜಿಕ್, ಐಚ್ಛಿಕ ಕನ್ನಡ,

ಡಿಸೆಂಬರ್ 9 ರಂದು ಮನಃಶಾಸ್ತ್ರ, ಭೂಗೋಳಶಾಸ್ತ್ರ, ಇನ್ಫಾರ್ಮೇಶನ್ ಟೆಕ್ನಾಲಜಿ, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್,

ಡಿಸೆಂಬರ್ 10 ರಂದು ಉರ್ದು, ಹಿಂದಿ, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...