ಬೆಂಗಳೂರು: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸಿದ್ಧವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.
ನವೆಂಬರ್ 29 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ಪರಿಷ್ಕೃತ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ. ಕಾಲೇಜು ಮಟ್ಟದಲ್ಲಿ ಮೌಲ್ಯಮಾಪನಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಉಪನ್ಯಾಸಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅರ್ಧವಾರ್ಷಿಕ ಪರೀಕ್ಷೆ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ, ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಹೇಳಲಾಗಿದೆ.