ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 13 ರಿಂದ 28ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಫೆಬ್ರವರಿ 13 ಕನ್ನಡ, ಅರೇಬಿಕ್
ಫೆಬ್ರವರಿ 14 ಹಿಂದಿ
ಫೆಬ್ರವರಿ 15 ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಫೆಬ್ರವರಿ 16 ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಫೆಬ್ರವರಿ 17 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಫೆಬ್ರವರಿ 19 ಇತಿಹಾಸ, ಭೌತಶಾಸ್ತ್ರ
ಫೆಬ್ರವರಿ 20 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಫೆಬ್ರವರಿ 21 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಫೆಬ್ರವರಿ 22 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಫೆಬ್ರವರಿ 23 ರಂದು ಗಣಿತ, ಶಿಕ್ಷಣ ಶಾಸ್ತ್ರ,
ಫೆಬ್ರವರಿ 24 ಅರ್ಥಶಾಸ್ತ್ರ
ಫೆಬ್ರವರಿ 26 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಫೆಬ್ರವರಿ 27 ಇಂಗ್ಲಿಷ್
ಫೆಬ್ರವರಿ 28 ಭೂಗೋಳಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.