
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿದೆ.
2021 -22 ನೇ ಸಾಲಿನ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬದಲಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದಂತೆ ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಏ. 21 ರಂದು ಭಾಷಾ ವಿಷಯಗಳಾದ ಉರ್ದು ಮತ್ತು ಅರೇಬಿಕ್ ಪರೀಕ್ಷೆಗಳನ್ನು ನಿಗದಿ ಮಾಡಿದ್ದು, ಏಪ್ರಿಲ್ 21 ರಂದು ಉರ್ದು ಹಾಗೂ ಏಪ್ರಿಲ್ 29 ರಂದು ಅರೇಬಿಕ್ ಪರೀಕ್ಷೆ ನಡೆಯಲಿದೆ. ಮಾಹಿತಿಗೆ https://pue.kar.nic.in ಗಮನಿಸಬಹುದಾಗಿದೆ.

