alex Certify ಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ.

ಕೆಲವು ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 1.30 ರವರೆಗೆ, ಮತ್ತೆ ಕೆಲವು ಪರೀಕ್ಷೆಗಳು ಮಧ್ಯಾಹ್ನ 2 15 ರಿಂದ ಸಂಜೆ 5.30 ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮೇ 22 ಕನ್ನಡ, ಅರೇಬಿಕ್

ಮೇ 23 ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ಮೇ 24 ಇಂಗ್ಲಿಷ್, ಮಧ್ಯಾಹ್ನ ಐಟಿ, ರಿಟೇಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ನೆಸ್

ಮೇ 25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಮೇ 26 ರಂದು ಇತಿಹಾಸ, ಸಂಖ್ಯಾಶಾಸ್ತ್ರ

ಮೇ 27ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮೇ 28 ರಂದು ರಜೆ

ಮೇ 29ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ಮೇ 30ರಂದು ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಮೇ 31ರಂದು ರಾಜ್ಯಶಾಸ್ತ್ರ, ಗಣಿತ

ಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ಜೂನ್ 2 ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...