ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ.
ಬೆಂಗಳೂರಿನ 39 ಕೇಂದ್ರಗಳು ಸೇರಿ ರಾಜ್ಯಾದ್ಯಂತ 301 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ ಎಲ್ಲ ವಿದ್ಯಾರ್ಥಿಗಳು ಮಂಡಳಿಯ https://kseab.karnataka.gov.in ವೆಬ್ಸೈಟ್ ನಲ್ಲಿ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
11 ಅಂಕಿಗಳ ನೋಂದಣಿ ಸಂಖ್ಯೆ ಹೊಂದಿಲ್ಲದ ವಿದ್ಯಾರ್ಥಿಗಳು ನೇರವಾಗಿ ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.