
ಕೊಪ್ಪಳ: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ತಾಲೂಕಿನ ಯಲಬುರ್ತಿಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಮಾಲಿ ಪಾಟೀಲ್(18) ಮೃತಪಟ್ಟ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿಯಲ್ಲಿ ಶೇಕಡ 75 ಕ್ಕಿಂತ ಹೆಚ್ಚು ಅಂಕ ನಿರೀಕ್ಷಿಸಿದ್ದ ವಿಜಯಲಕ್ಷ್ಮಿ ಅವರಿಗೆ ಶೇಕಡ 59 ರಷ್ಟು ಅಂಕ ಬಂದಿದೆ. ಇತ್ತೀಚಿಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ನಿರೀಕ್ಷಿತ ಅಂಕಗಳು ಬಾರದ ಕಾರಣ ಮನನೊಂದ ಅವರು ಏಪ್ರಿಲ್ 11ರಂದು ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ವಿಜಯಲಕ್ಷ್ಮಿಯನ್ನು ಕೊಪ್ಪಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 18 ರಂದು ರಾತ್ರಿ ಮೃತಪಟ್ಟಿದ್ದಾರೆ. ಕುಷ್ಠಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.