ಬೆಂಗಳೂರು: 2015- 16ನೇ ಸಾಲಿನ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ಸ್ ಕೋರ್ಟ್ ಆದೇಶಿಸಿದೆ.
2016ರ ಮಾರ್ಚ್ 21ರಂದು ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆದಿದ್ದು, ಅಂದು ಬೆಳಗ್ಗೆ 7:30ಕ್ಕೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದಲ್ಲದೇ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಹರಿದಾಡಿತ್ತು. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಒಟ್ಟು 18 ಆರೋಪಿತರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿಯೇ ಓರ್ವ ಆರೋಪಿ ಮೃತಪಟ್ಟಿದ್ದರು. ಇನ್ನುಳಿದ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.