ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರ ಪ್ರಕಟವಾಗಬೇಕಿತ್ತು. ಆದರೆ, ವಿಳಂಬದ ಕಾರಣ ಕೊನೆಯವಾರ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಜೂನ್ 24 ಅಥವಾ 28ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗಿದೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಅರ್ಧಕ್ಕಿಂತ ಹೆಚ್ಚು ಮುಗಿದಿದ್ದು, ಆದಷ್ಟು ಬೇಗನೆ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಯಾವುದೇ ತೊಂದರೆಯಾಗದು ಎಂದು ಹೇಳಲಾಗಿದೆ.