ಬೆಂಗಳೂರು: ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಬಿರುಸಿನಿಂದ ಸಾಗಿದ್ದು, ಏಪ್ರಿಲ್ ಮೂರನೇ ವಾರ ಫಲಿತಾಂಶ ಪ್ರಕಟಿಸಲಾಗುವುದು.
ಏಪ್ರಿಲ್ 5 ರಿಂದ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಮೊದಲ ಎರಡು ದಿನಗಳ ಕಾಲ ಮೌಲ್ಯಮಾಪಕರ ಹಾಜರಾತಿ ಪ್ರಮಾಣ ಕಡಿಮೆಯಾಗಿದ್ದು, ನಂತರ ಸುಧಾರಿಸಿದೆ. ಇನ್ನು ಐದಾರು ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ.
ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದ್ದು, ಬಹುತೇಕ ಏಪ್ರಿಲ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.