alex Certify BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: 2020 -21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ಸಂಜೆ 4 ಗಂಟೆಯ ನಂತರ ವಿದ್ಯಾರ್ಥಿಗಳು https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಬಳಸಿಕೊಂಡು ಫಲಿತಾಂಶವನ್ನು ವೀಕ್ಷಿಸಬಹುದು. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿನ ಪರೀಕ್ಷಾ ಫಲಿತಾಂಶವನ್ನು ಆಧರಿಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಸಿದ್ಧಪಡಿಸಲಾಗಿದೆ.

ಫಲಿತಾಂಶ ವೀಕ್ಷಣೆಗೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಈಗಾಗಲೇ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ತಮ್ಮ ಜಿಲ್ಲೆ, ಕಾಲೇಜಿನ ಹೆಸರು, ನಮೂದಿಸಿ ನೋಂದಣಿ ಸಂಖ್ಯೆ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಲಿಂಕ್ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು https://dpue-exam.karnataka.gov.in, registration number/reg number ಲಿಂಕ್ ಮೂಲಕ ಪಡೆದುಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...